ಉಳ್ಳಾಲ: ತೌಡುಗೋಳಿ ಶ್ರೀ ದುರ್ಗಾ ದೇವಿ ಕ್ಷೇತ್ರ , ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಆಗಸ್ಟ್ 10, ರ ಭಾನುವಾರ ವನಮಹೋತ್ಸವ ಹಾಗೂ ಸಸಿ ವಿತರಣೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಆಗಮಿಸಿದ ಭಕ್ತರಿಗೆ ಮಾಡಿ ಮಾತನಾಡುತ್ತಾ ಗಿಡ ನೆಟ್ಟು ಬಿಡಬಾರದು, ಅದನ್ನು ಪೋಷಣೆಮಾಡಿದರೆ ಅದು ಮುಂದೆ ಹೆಮ್ಮರವಾಗಿ ಬೆಳೆದು ಫಲ ಕೊಡುತ್ತದೆ, ನಮಗೆ ನೆರಳು ಕೊಡುತ್ತದೆ ಮನುಷ್ಯನಿಗೆ ಉಸಿರಾಡಲು ಸ್ವಚ್ಛ ಗಾಳಿಕೊಡುತ್ತದೆ ಈ ಕ್ಷೇತ್ರ ಪರಿಸರ ಕಾಳಜಿಯೊಂದಿಗೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಗಳಾಗಿದ್ದ ಹರೀಶ್ ಇರಾ ಮಾತನಾಡಿ ತೌಡುಗೋಳಿ ಶ್ರೀ ದುರ್ಗಾ ದೇವಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಜೊತೆಗೆ ಪರಿಸರ ಕಾಳಜಿಯ ಕೆಲಸ ಮಾಡುತ್ತಿರುವುದು ಶ್ಲ್ಯಾಘನೀಯ ಎಂದು ಹೇಳಿದರು.
ಈ ಸಂದರ್ಭ ಯಕ್ಷಗಾನ ಕಲಾವಿದ ಆನಂದ ಎಸ್, ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರದ ಗೋವಿಂದ ಗುರುಸ್ವಾಮಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಬಳಿಕ ಜೀರ್ಣೋದ್ದಾರ ಸಮಿತಿ ಸಭೆ ನಡೆಯಿತು.
ಶ್ರೀ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಕೋಶಾಧಿಕಾರಿ ಶಿವಪ್ರಸಾದ್ ತೌಡುಗೋಳಿ ಪ್ರಸ್ತಾವನೆ ಮತ್ತು ಸ್ವಾಗತಿಸಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19