ಕೈಗೆಟುಕುವ ದರದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್: ನೋಂದಣಿ ಹೇಗೆ?

ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿದೆ ಎಂದು ಮಾಜಿ ಮಂಗಳೂರು ಕ್ಯಾಂಪಸ್‌ ಪ್ರೊ. ವೈಸ್ ಚಾನ್ಸಲರ್ ಡಾ. ದಿಲೀಪ್ ಜಿ. ನ್ಯಾಕ್ ಘೋಷಿಸಿದ್ದಾರೆ.

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಅವರು, ಗಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧೈಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದರು. “2000 ನೇ ವರ್ಷದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ ಲಕ್ಷಾಂತರ ಫಲಾನುಭವಿಗಳಿಗೆ ವರದಾನವಾಗಿದೆ ಎಂದಿದ್ದಾರೆ.
2000 ನೇ ಇಸವಿಯಲ್ಲಿ, 10500 ಸದಸ್ಯರು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ 3.68 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ” ಎಂದು ತಿಳಿಸಿದರು.

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಉನ್ನಿಕೃಷ್ಣನ್ ಬಿ ಮಾತನಾಡಿ “ಈ ಯೋಜನೆಯಡಿಯಲ್ಲಿ – ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಈ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಆಸ್ಪತ್ರೆಗಳಾದ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ. ಡಾ. ಬಿ. ಆರ್. ಅಂಬೇಡ್ಕರ್ ವೃತ್ತ, ಮರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು. ಈ ಕಾರ್ಡ್‌ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು” ಎಂದು ತಿಳಿಸಿದರು.

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇಲ್ಲಿನ ಮುಖ್ಯ ಆಡಳಿತಾಧಿಕಾರಿ ಡಾ. ಶಿವಾನಂದ ಪ್ರಭು ಕಾರ್ಡಿನ ಸದಸ್ಯತ್ವದ ಬಗ್ಗೆ ಮಾತನಾಡಿ, ʼಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350/ -ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮದುವೆಯಾಗದ ಮಕ್ಕಳಿಗೆ ರೂ. 700/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ. 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900/- ಆಗಿರುತ್ತದೆ. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600/-, ಕುಟುಂಬಕ್ಕೆ ರೂ. 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 1100/- ಆಗಿರುತ್ತದೆ. ಈ ರಚನಾತ್ಮಕ ವಿಧಾನವು ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ಸೇವೆ ಸುಲಭವಾಗಿ ಲಭ್ಯವಾಗುವಂತೆ ಮತ್ತು ಕೈಗೆಟುಕುವಂತೆ ಮಾಡುತ್ತದೆ” ಎಂದು ವಿವರಿಸಿದರು.

ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಮತ್ತು ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಫೀರ್ ಸಿದ್ದಿಕಿ ಕಾರ್ಡ್‌ ಪವರಯೋಜನಗಳನ್ನು ವಿವರಿಸುತ್ತಾ. “ಮೇಶಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 50% ದ ವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 200 ದ ವರೆಗೆ ರಿಯಾಯಿತಿ, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ. ಎಮ್.ಆರ್.ಐ. ಅಲ್ವಾ ಸೌಂಡ್, ಎಕ್ಸ್‌ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ 20% ದ ವರೆಗೆ ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10% ದ ವರೆಗೆ ರಿಯಾಯಿತಿಯು ಇರುತ್ತದೆ. ಒಳರೋಗಿಯಾಗಿ ದಾಖಲಾದಲ್ಲಿ (ಕನ್ಸುಮೇಬಲ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ಬಿಲ್ಲಿನಲ್ಲಿ 25% ದ ವರೆಗೆ ರಿಯಾಯಿತಿ ಸಿಗುತ್ತದೆ. ಈ ಯೋಜನೆಗೆ ಸೇರಲು ವಯಸ್ಸಿನ ಮಿತಿಯಿಲ್ಲ ಎಂದು ತಿಳಿಸಿದರು.

ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ದೀಪಕ್ ಮಡಿ ಮಾತನಾಡಿ, ಸಾರ್ವಜನಿಕರು ಮಣಿಪಾಲ್ ಹೆಲ್ತ್ ಕಾರ್ಡ್ ನೊಂದಣಿಯನ್ನು ಕೆಎಂಸಿ ಆಸ್ಪತ್ರೆ ಅತ್ತಾವರ, ಕೆಎಂಸಿ ಆಸ್ಪತ್ರೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮತ್ತು ಮರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲಿನಲ್ಲಿರುವ ಕೌಂಟ‌ರಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕೇರಳದಾದ್ಯಂತ ಇರುವ ನಮ್ಮ ಅಧಿಕೃತ ಪತಿನಿಧಿಗಳ ಮೂಲಕ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡ್ ಮಾಹಿತಿಗಾಗಿ ದೂರವಾಣಿ 0824-2285214, 7022078002‌ ಗೆ ಸಂಪರ್ಕಿಸಬಹುದು. ನಿಮ್ಮ ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ತಿಳಿಯಲು ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಯಿಂದ 8867579797ಗೆ ಮಿಸ್ಡ್‌ ಕಾಲ್‌ ನೀಡಬಹುದು.

ಮಾಧ್ಯಮ ಸದಸ್ಯರಿಗೆ ಉತ್ತಮ ಆರೋಗ್ಯವನ್ನು ಹಾರೈಸುವ ಸೂಚಕವಾಗಿ ಮಾಹೆ ಮಂಗಳೂರು ಕ್ಯಾಂಪಸ್‌ನ ಪ್ರೊ.ವೈಸ್ ಚಾನ್ಸಲ‌ರ್ ಡಾ. ದಿಲೀಪ್ ಜಿ ನ್ಯಾಕ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಣಿಪಾಲ ಆರೋಗ್ಯ ಕಾರ್ಡ್ ಹಸ್ತಾಂತರಿಸಿದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!