ಹೆಣದ ತುಂಡುಗಳು ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯನ್ನೇ ಪೀಸ್‌ ಪೀಸ್‌ ಮಾಡಿ ಎಲ್ಲೆಂದರಲ್ಲಿ ಎಸೆದಿದ್ದ ಅಳಿಯ

ತುಮಕೂರು: ತುಮಕೂರು ಜಿಲ್ಲೆಯ ಗೃಹ ಸಚಿವ ಜಿ. ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಎಲ್ಲೆಂದರಲ್ಲಿ ಶವದ ತುಂಡುಗಳು ಪತ್ತೆ ಪ್ರಕರಣಕ್ಕೆ  ಹೊಸ ಟ್ವಿಸ್ಟ್ ಸಿಕ್ಕಿದ್ದು,  ಪೊಲೀಸರಂಥ ಪೊಲೀಸರೇ ಶಾಕ್‌ ಆಗಿದ್ದಾರೆ.

ಮೃತ ಲಕ್ಷ್ಮೀದೇವಮ್ಮ  ಎಂಬಾಕೆಯದ್ದಾದ್ದು, ಇವಳನ್ನು ಸ್ವಂತ ಅಳಿಯನೇ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.  ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣನ ಜೊತೆ ಸೇರಿ ಹತ್ಯೆ ಮಾಡಿದ್ದಾನೆ.

ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ ಫಾರ್ಮ್ ಹೌಸ್ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿತ್ತು. ಬಳಿಕ ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಅತ್ತೆಯ ಕೊಲೆ ಆದರೂ ಅಳಿಯ ಸ್ಥಳದಲ್ಲಿ ಇಲ್ಲದಿರುವುದಕ್ಕೆ ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!