ಜಗನ್ನಿವಾಸ್‌ರಾವ್‌ ಪುತ್ರನ ʻಮಗುʼ ಪ್ರಕರಣ: ತಾಯಿಗೆ ಬೆದರಿಕೆ

ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ. ರಾವ್‌ ಎಂಬಾತ ಕಾಲೇಜ್‌ ಯುವತಿಯೋರ್ವಳಿಗೆ ಮಗು ಕರುಣಿಸಿದ ಪ್ರಕರಣ ಹೊಸ ತಿರುವಿನತ್ತ ಸಾಗಿದೆ. ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗೆ ಬೆದರಿಕೆಯಿದ್ದು, ಪೊಲೀಸ್ ರಕ್ಷಣೆ ನೀಡುವಂತೆ ತನ್ನ ಪುಟಾಣಿ ಕಂದ ಹಾಗೂ ತಾಯಿ ಜೊತೆ ಆಗಮಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾಳೆ.

ಸೋಮವಾರ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಆಗಮಿದ ಸಂತ್ರಸ್ತೆ ಈ ಬಗ್ಗೆ ಮನವಿ ಸಲ್ಲಿಸಿದ್ದು, “ಇತ್ತೀಚೆಗೆ ನನ್ನ ಮನೆಯ ಸುತ್ತಮುತ್ತ ಕೆಲವ ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿದ್ದಾರೆ. ಅದರಲ್ಲೂ ರಾತ್ರಿಯ ವೇಳೆ ಅಪರಿಚಿತರ ಸಂಚರಿಸುತ್ತಿರುವುದು ನಾನು ಮತ್ತು ನನ್ನ ತಾಯಿ ಗಮನಿಸಿದ್ದೇವೆ. ನನಗೆ ಆಗಿರುವ ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಗುವುದು ನನ್ನ ಮಗುವಿನಿಂದ ಮಾತ್ರ. ಆದ್ದರಿಂದ ನನ್ನ ಮಗುವಿನ ಜೀವಕ್ಕೆ ಯಾರಿಂದಲಾದರೂ ಅಪಾಯವಾಗುವ ಬಗ್ಗೆ ಭಯವಿದೆ. ಆದ್ದರಿಂದ ನನಗೆ ಮತ್ತು ನನ್ನ ಮಗುವಿಗೆ ಪೊಲೀಸ್ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದಾಳೆ.

ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಡಿ ಮಾತನಾಡಿ, ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಆರೋಪಿಯ ತಂದೆಗೆ ತಿಳಿಸಿದ್ದೇನೆ. ಇಬ್ಬರಿಗೂ ಆದಷ್ಟು ಬೇಗ ಮದುವೆ ಮಾಡಿ, ಆತ ಜೈಲಲ್ಲಿಯೇ ಇರುವುದು ಬೇಡ. ಚಿನ್ನದಂತ ಮಗುವಿದೆ. ಇನ್ನೇನು ಬೇಕು ಎಂದು ಹೇಳಿದ್ದೇನೆ. ಇದರಿಂದ ಎರಡೂ ಕುಟುಂಬಗಳಿಗೆ ಸಮಸ್ಯೆಯಾಗುತ್ತದೆ ಎಂದಿದ್ದೇನೆ. ಇದಕ್ಕೆ ಒಪ್ಪದಿದ್ದರೆ ಮುಂದೆ ಏನು ಮಾಡಬೇಕು ಎಂದು ನಿರ್ಧರಿಸುತ್ತೇವೆ. ಹೇಗಾದರೂ ಮಾಡಿ ಹುಡುಗಿಗೆ ಮೋಸವಾಗಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಆರೋಪಿ ಶ್ರೀಕೃಷ್ಣ ಜೆ. ರಾವ್ ಸಹಪಾಠಿ ವಿದ್ಯಾರ್ಥಿನಿಗೆ ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿರುವ ಬಗ್ಗೆ ಸಂತ್ರಸ್ತೆ ಜೂನ್ 24ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅದರಂತೆ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ ಜೂ.27ರಂದು ಸಂತ್ರಸ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶ್ರೀಕೃಷ್ಣ ರಾವ್ ನನ್ನು ಜುಲೈ 4ರಂದು ಪೊಲೀಸರು ಬಂಧಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!