ಬೆಂಗಳೂರು: ಸಚಿವ ಸ್ಥಾನದಿಂದ ಕೆಎನ್ ರಾಜಣ್ಣರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಮಧುಗಿರಿ ಬಂದ್ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.
ಸಾಮೂಹಿಕ ರಾಜೀನಾಮೆ
ಮಧುಗಿರಿಯ ಪುರಸಭೆ ವಾರ್ಡ್ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.