ಸುರತ್ಕಲ್: ಜಾತಿ, ಮತ, ಧರ್ಮಗಳನ್ನು ಮರೆತು ನಾವು ನೀಡುವ ರಕ್ತದಿಂದ ಎಷ್ಟೋ ಜೀವಗಳನ್ನು ಉಳಿಸಬಹುದಾಗಿದೆ ಎಂದು ಸುರತ್ಕಲ್ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ನುಡಿದರು.
ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಮತ್ತು ಮಂಗಳೂರು ವಿಶೇಷ ಆರ್ಥಿಕ ವಲಯ ಹಾಗೂ ಲಯನ್ಸ್ ಕ್ಲಬ್ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಕೆ,ಎಂ,ಸಿ ಅಸ್ಪತ್ರೆ ಮಂಗಳೂರು ಮತ್ತು ಎ.ಜೆ,ಅಸ್ಪಿಟಲ್ ರಿಸರ್ಚ್ ಸೆಂಟರ್ ಮಂಗಳೂರು ಇವರ ಸಹಯೋಗದೊಂದಿಗೆ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ವಜ್ರಮಹೋತ್ಸವ ಸಭಾಂಗಣದಲ್ಲಿ ಜರುಗಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನವರು ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿದ್ದು ಅದರ ಜೊತೆಗೆ ರಕ್ತದಾನದಂತಹ ಶಿಬಿರವನ್ನು ಇತರ ಸಂಸ್ಥೆಗಳ ಜೊತೆ ಅಯೋಜನೆ ಮಾಡಿರುವುದು ಶ್ಲಾಘನೀಯ ಮುಂದೆಯೂ ಇಂತಹ ಸೇವೆಗಳು ಮುಂದುವರಿಯಲಿ ಎಂದರು.
ವೇದಿಕೆಯಲ್ಲಿ ಮುಕ್ಕ ಮೆಡಿಸಿನ್ ಪ್ರೊಪೆಸರ್ ಡಾ! ಸುನೀಲ್ ಕುಮಾರ್, ಬಾಳ ಬಿ.ಎ.ಎಸ್.ಎಫ್ ಸಂಸ್ಥೆಯ ಎಚ್ ಅರ್ ವಿಭಾಗದ ಪ್ರಭಂದಕರಾದ ಸಂತೋಷ್ ಪೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ಶ್ರೀರಾಮ ಪೈನಾನ್ಸ್ ಲಿಮಿಟೆಡ್ ವಲಯ ಮುಖ್ಯಸ್ಥರಾದ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಕಕ್ಕುಂಜೆ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಕೆಂಚನೂರು ಹೊಸಬೆಟ್ಟು, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಎಚ್ ಶ್ರೀರಂಗ, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಗೌರವಾಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷರಾದ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಸಂಚಾಲಕರಾದ ಸಂತೋಷ್ ಬೇಕಲ್,ಅನಿಲ್ ಶೆಟ್ಟಿ ತೇವು ಸೂರಿಂಜೆ ಮುಂತಾದವರು ಉಪಸ್ಥಿತರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶೇಷ ಆರ್ಥಿಕ ವಲಯದ ಅಧಿಕಾರಿ ಫಣಿಭೂಷಣ್ ವಹಿಸಿದ್ದರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಕಿರಣ್ ಅಚಾರ್ಯ ಸ್ವಾಗತಿಸಿದರು. ಜಯಪ್ರಕಾಶ್ ಸೂರಿಂಜೆ ಧನ್ಯವಾದ ಸಮರ್ಪಿಸಿದರು.