ಖಜಾನಾ ಜ್ಯುವೆಲ್ಲರಿಗೆ ನುಗ್ಗಿದ ದರೋಡೆ ಗ್ಯಾಂಗ್: ಸಿಬ್ಬಂದಿಯ ಮೇಲೆ ಗುಂಡಿನ ದಾಳಿ

ಹೈದರಾಬಾದ್: ಚಂದಾನಗರದಲ್ಲಿರುವ ಖಜಾನಾ ಜ್ಯುವೆಲ್ಲರಿ ಅಂಗಡಿಯಲ್ಲಿ ಶಸ್ತ್ರಸಜ್ಜಿತ ಗುಂಪೊಂದು ದರೋಡೆ ಮಾಡಿ, ತಡೆಯಲೆತ್ನಿಸಿದ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿರುವ ಘಟನೆ ವರದಿಯಾಗಿದೆ.

6 ಮಂದಿ ಮುಸುಕುಧಾರಿಗಳು ಗುಂಡು ಹಾರಿಸಿ, ಸಿಸಿಟಿವಿ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮುಖಕ್ಕೆ ಮಾಸ್ಕ್​ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು, ಅಂಗಡಿ ಪ್ರವೇಶಿಸುತ್ತಿದ್ದಂತೆ ಸಿಬ್ಬಂದಿಯನ್ನು ಬೆದರಿಸಲು ಪ್ರಾರಂಭಿಸಿದ್ದಾರೆ. ಗನ್​ ತೋರಿಸಿ ಲಾಕರ್​ ಕೀ ನೀಡಿ ಎಂದು ಬೆದರಿಸಿದ್ದಾರೆ. ನಂತರ ಶಾಪ್​ನ ಸಹಾಯಕ ವ್ಯವಸ್ಥಾಪಕನಿಗೆ ಗನ್​ ತೋರಿಸಿ ಹೆದರಿಸಿ ಲಾಕರ್ ಕೀ ನೀಡುವಂತೆ ಒತ್ತಾಯಿಸಿದ್ದಾರೆ. ತಾನು ಕೀ ನೀಡುವುದಿಲ್ಲ ಎಂದು ಹೇಳಿದ್ದಕ್ಕೆ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಶಾಪ್​ನ ಉಪ ವ್ಯವಸ್ಥಾಪಕರ ಕಾಲಿಗೆ ಗಾಯವಾಗಿದೆ.

ಬಳಿಕ ಬಂಗಾರದ ಆಭರಣಗಳಿದ್ದ ಸ್ಟಾಲ್​ಗಳ ಗಾಜುಗಳನ್ನು ಒಡೆದು ಹಾಕಿದ್ದಾರೆ. ಇದನ್ನು ತಡೆಯಲೆತ್ನಿಸಿದ ಸಿಬ್ಬಂದಿ ಮೇಲೆ ದಾಳಿ ಮಾಡಿ ಗುಂಡು ಹಾರಿಸಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಈ ಕುರಿತು ಮಾಹಿತಿ ತಿಳಿದ ತಕ್ಷಣ ಸೈಬರಾಬಾದ್ ಕಮಿಷನರ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!