ಮಗುವಿಗೆ ಜನ್ಮ ನೀಡಿದ ಬಾಲಕಿ!: ಹಸುಗೂಸು ಸಾವು

ಸುಬ್ರಹ್ಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆದರೆ ಅಗತ್ಯ ತೂಕ ಕಡಿಮೆ ಇದ್ದುದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೊಬ್ಬಳನ್ನು ಆಕೆಯ ಸಂಬಂಧಿಯೇ ಗರ್ಭಿಣಿ ಮಾಡಿದ್ದಾಗಿ ಕೇಸ್‌ ದಾಖಲಾಗಿತ್ತು. ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೋಲೀಸ್‌ ಠಾಣೆ ಮೆಟ್ಟಿಲೇರಿದ್ದರಿಂದ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿ, ಆರೋಪಿಯನ್ನು ಬಂಧಿಸಲಾಗಿತ್ತು.

ಬಾಲಕಿ ಸೋಮವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದು, ಮರುದಿನ ರಾತ್ರಿ ಮಗು ಮೃತಪಟ್ಟಿದೆ. ಅವಧಿಗಿಂತಲೇ ಮಗು ಜನನವಾಗಿದ್ದರಿಂದ ಹಾಗೂ ಅಗತ್ಯ ತೂಕ ಇಲ್ಲದೇ ಇರುವುದರಿಂದ ಮಗು ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ.ಸುಬ್ರಹ್ಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆದರೆ ಅಗತ್ಯ ತೂಕ ಕಡಿಮೆ ಇದ್ದುದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೊಬ್ಬಳನ್ನು ಆಕೆಯ ಸಂಬಂಧಿಯೇ ಗರ್ಭಿಣಿ ಮಾಡಿದ್ದಾಗಿ ಕೇಸ್‌ ದಾಖಲಾಗಿತ್ತು. ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೋಲೀಸ್‌ ಠಾಣೆ ಮೆಟ್ಟಿಲೇರಿದ್ದರಿಂದ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿ, ಆರೋಪಿಯನ್ನು ಬಂಧಿಸಲಾಗಿತ್ತು.

ಬಾಲಕಿ ಸೋಮವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದು, ಮರುದಿನ ರಾತ್ರಿ ಮಗು ಮೃತಪಟ್ಟಿದೆ. ಅವಧಿಗಿಂತಲೇ ಮಗು ಜನನವಾಗಿದ್ದರಿಂದ ಹಾಗೂ ಅಗತ್ಯ ತೂಕ ಇಲ್ಲದೇ ಇರುವುದರಿಂದ ಮಗು ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!