ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಉಳಿದ 7 ಆರೋಪಿಗಳ ಜಾಮೀನನ್ನು ಕೂಡ ಸುಪ್ರೀಂಕೋರ್ಟ್ ಗೆ ರದ್ದುಗೊಳಿಸಿದೆ. ಈ ಹಿನ್ನೆಲೆ ದರ್ಶನ್‌ಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ಕೊಟ್ಟಿದೆ.
ರಾಜ್ಯ ಸರ್ಕಾರ ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ಕೊಟ್ಟಿರುವ ಕುರಿತು ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುತ್ತದೆ ಎಂದು ಸುಪ್ರೀಂ ಖಡಕ್ ವಾರ್ನಿಂಗ್ ಕೊಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳು ಶರಣಾಗಬೇಕು ಎಂದು ಸೂಚಿಸಿದೆ. ಶರಣಾಗದಿದ್ದರೇ ಕೂಡಲೇ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸುಪ್ರೀಂ ಸೂಚಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19