ಪವಿತ್ರಾ ಗೌಡ ಅರೆಸ್ಟ್!!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ನಟ ದರ್ಶನ್, ಪವಿತ್ರ ಗೌಡ ಹಾಗೂ ಇತರ 7 ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರೇಣುಕಾಸ್ವಾಮಿ ಪರ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನನ್ನು ರದ್ದುಗೊಳಿಸಿತ್ತು. ಬೆಂಗಳೂರಿನ ಆರ್‌ಆರ್‌ ನಗರ ನಿವಾಸಕ್ಕೆ ತೆರಳಿದ ಪೊಲೀಸರು ಪವಿತ್ರ ಗೌಡಳನ್ನು ಬಂಧಿಸಿದ್ದಾರೆ.


ಸುಪ್ರೀಂ ಕೋರ್ಟ್‌ ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿದ್ದರು. ಜೊತೆಗೆ ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ ಅತ್ತಿದ್ದಾರೆ. ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದು ಮನೆಯ ಬಾಗಿಲು ತೆರೆದಂತೆ ಅರೆಸ್ಟ್‌ ಮಾಡಿದ್ದಾರೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!