ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಿದ್ದಾರೆ. ಇನ್ನೋವಾ ಕಾರಿನಲ್ಲಿ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ ದರ್ಶನ್ ರನ್ನು ಬಂಧಿಸಿ ಕರೆದೊಯ್ಯಲಾಗುತ್ತಿದೆ.
ಕೊಲೆ ಪ್ರಕರಣದ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಡಲೇ ವಶಕ್ಕೆ ಪಡೆಯುವಂತೆ ಸುಪ್ರೀಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿತ್ತು. ಇನ್ ಸ್ಪೆಕ್ಟರ್ ಗಳಾದ ನಾಗೇಶ್ ಹಾಗೂ ಸುಬ್ರಹ್ಮಣ್ಯ ಅವರು ಬಂಧಿಸಲು ತೆರಳಿದ್ದರು.
ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿ ಏಳು ಮಂದಿಗೆ ಜಾಮೀನು ನೀಡಿತ್ತು. ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ಸುಪ್ರೀಂಕೋರ್ಟ್ ಹೈಕೋರ್ಟ್ ನೀಡಿದ್ದ ಜಾಮೀನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ಈ ಆದೇಶ ನೀಡಿತ್ತು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19