ಮಂಗಳೂರು : ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.
ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, “ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ” ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಧನ್ಯವಾದ ಸ್ವೀಕರಿಸಿ ಮಾತನಾಡಿನ ಅವರು “ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ — ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು” ಎಂದು ಹೇಳಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ದರು.