ಮಂಗಳೂರು: ಮಂಗಳೂರಿನ ಬಜಾಲ್ ಬೊಲ್ಲಗುಡ್ಡೆ ನಿವಾಸಿ ರೋಶನ್ ಸಲ್ಡಾನ್ಹಾ (43) ದೇಶದ ವಿವಿಧೆಡೆ ನೂರಾರು ಕೋಟಿ ರೂಪಾಯಿ ವಂಚಿಸಿ ಪೊಲೀಸರಿಂದ ಬಂಧಿತನಾಗಿರುವ ಈತನ ನಾಲ್ಕು ಪ್ರಕರಣಗಳು ಸಿಐಡಿಗೆ ಹಸ್ತಾಂತರಗೊಂಡಿವೆ.
ಬಿಹಾರ ಉದ್ಯಮಿಯೊಬ್ಬರಿಗೆ ರೋಶನ್ 10 ಕೋಟಿ.ರೂ. ಮೋಸ ಮಾಡಿದ ಪ್ರಕರಣ ಸಹಿತ ಮಂಗಳೂರಿನ ಸೆನ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳು ಮತ್ತು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿರುವ ಮುಂಬಯಿ ಮೂಲದ ಉದ್ಯಮಿಯಿಂದ 5 ಕೋ. ರೂ. ಪಡೆದು ವಂಚಿಸಿದ ಪ್ರಕರಣ, ಬೆಂಗಳೂರು ಮೂಲದ ಮಹಿಳೆಯೊಬ್ಬರಿಗೆ 14.74 ಲಕ್ಷ ರೂ. ವಂಚನೆ ಪ್ರಕರಣಗಳ ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮಾಡಲಿದ್ದಾರೆ.
ಮಂಗಳೂರಿನ ಸೆನ್ ಪೊಲೀಸರು ಜು. 17ರಂದು ರೋಶನ್ ಸಲ್ಡಾನ್ಹಾನನ್ನು ಆತನ ಮನೆಯಲ್ಲಿ ಬಂಧಿಸಿದ್ದರು. ಬಳಿಕ ಆತನಿಗೆ ನ್ಯಾಯಾಲವು ನ್ಯಾಯಾಂಗ ಬಂಧನ ವಿಧಿಸಿತ್ತು. ಆತನ ಬಂಧನದ ವಿಚಾರ ತಿಳಿಯುತ್ತಿದ್ದಂತೆ ಹಲವು ಮಂದಿ ಉದ್ಯಮಿಗಳು ತಮಗಾದ ವಂಚನೆಗೆ ಸಂಬಂಧಿಸಿದಂತೆ ದೂರು ನೀಡಲು ಮುಂದೆ ಬಂದಿದ್ದರು. ಮಹಾರಾಷ್ಟ್ರದ ಉದ್ಯಮಿಗೆ 5 ಕೋ.ರೂ. ಮತ್ತು ಅಸ್ಸಾಂ ಮೂಲದ ವ್ಯಕ್ತಿಗೆ 20 ಕೋ.ರೂ. ವಂಚನೆ ಮಾಡಿರುವ ಕುರಿತಂತೆ ಪ್ರಕರಣ ದಾಖಲಾಗಿತ್ತು. ಹೈದರಾಬಾದ್ ಮೂಲದ ವ್ಯಕ್ತಿ 1 ಕೋ.ರೂ. ವಂಚನೆಯ ದೂರು ನೀಡಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19