ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರಿಸಿಕೊಂಡಿದ್ದ ಆರೋಪಿಗಾಗಿ ಬೆಳ್ತಂಗಡಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೋಲೀಸರ ಕಾರ್ಯಚರಣೆ ಯಶಸ್ವಿಯಾಗಿದ್ದು ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಬಂಧಿತ ಆರೋಪಿ.
ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಆರೋಪಿಯ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದ.ಕ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಹಾಗೂ ಬಂಟ್ವಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.