ಜಮ್ಮು-ಕಾಶ್ಮೀರದ ಮೇಘಸ್ಫೋಟ: ಸಾವಿನ ಸಂಖ್ಯೆ 60 ಕ್ಕೇರಿಕೆ, 100 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೋಸಿಟಿ ಗ್ರಾಮದಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿ 60 ಜನರು ಸಾವನ್ನಪ್ಪಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವಶೇಷಗಳು ಮತ್ತು ಮಣ್ಣಿನಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೇಘಸ್ಫೋಟದಲ್ಲಿ ಇದುವರೆಗೆ 60 ಜನರು ಸಾವನ್ನಪ್ಪಿದ್ದಾರೆ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಹಾಗೂ ಇನ್ನೂ ಅನೇಕರು ಕಾಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಕಾಣೆಯಾದವರ ನಿಖರವಾದ ಸಂಖ್ಯೆ ನಮಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಗಾಯಾಳುಗಳನ್ನು ವಿಶೇಷ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 35 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದರು. ಈಗ, 69 ಜನರು ಕಾಣೆಯಾಗಿದ್ದಾರೆ. ಅವರ ಕುಟುಂಬ ಸದಸ್ಯರು ತಮ್ಮನ್ನು ಸಂಪರ್ಕಿಸಿ ತಮ್ಮ ಕುಟುಂಬಸ್ಥರು ಕಾಣೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದರು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!