ಕಾರವಾರದಲ್ಲಿ ಕೂಲಿ ಹಣ ಕೊಡಲಿಲ್ಲ ಅಂತ ಸಲಾಕೆಯಿಂದ ಹೊಡೆದು ವ್ಯಕ್ತಿ ಕೊಲೆ !

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ.

ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ, ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಆರೋಪಿ.

ದಿನಗೂಲಿ ಹಣಕ್ಕಾಗಿ ವಾದಿರಾಜ ಮಠದ ಕಮಾನಿನ ಬಳಿ ಇಬ್ಬರ ನಡುವೆ ವಾಗ್ವಾದವಾಗಿತ್ತು. ಸಿಟ್ಟಿನಲ್ಲಿ ರವೀಶ್ ಗಣಪತಿ ಚನ್ನಯ್ಯನಿಗೆ ಮಂಜುನಾಥ ಬಸ್ಯಾ ಕೆಲಸಕ್ಕಾಗಿ ತಂದಿದ್ದ ಗುದ್ದಲಿಯ ಸಲಾಕೆಯಿಂದ ಏಕಾಏಕಿ ತಲೆಗೆ ಹೊಡೆದಿದ್ದಾನೆ. ಗಂಭೀರ ಗಾಯದಿಂದ ರಕ್ತಸ್ರಾವವಾಗಿ ರವೀಶ ಗಣಪತಿ ಚನ್ನಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಘಟನಾ ಸ್ಥಳಕ್ಕೆ ಡಿವೈ‌ಎಸ್‌ಪಿ ಗೀತಾ ಪಾಟಿಲ್, ಸಿಪಿಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶಿರಸಿ ಪಂಡಿತ್ ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!