ಆನಂದಪುರ: ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರಗೊಳಿಸಲು ಬಿಡುವುದಿಲ್ಲ ಎಂದು ಆನಂದಪುರದಲ್ಲಿ ಪತ್ರಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಅನಾಮಿಕ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದರ ಪರಿಣಾಮವಾಗಿ ರಾಜ್ಯ ಸರ್ಕಾರ ಎಸ್ಎಟಿ ರಚನೆ ಮಾಡಿದೆ. ಅನಾಮಿಕ ತೋರಿಸಿದ ಸ್ಥಳಗಳನ್ನು ಅಗೆದರೂ ಯಾವುದೇ ಕುರುಹುಗಳು ಸಿಗಲಿಲ್ಲ. ಧರ್ಮಸ್ಥಳ ಭಕ್ತರ ನಂಬಿಕೆಯ ಧಾರ್ಮಿಕ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರವನ್ನು ಅಪವಿತ್ರಗೊಳಿಸಲು ನಾವು ಬಿಡುವುದಿಲ್ಲ.
ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ಬಗ್ಗೆ ವಿಧಾನಸೌಧದಲ್ಲಿ ಧ್ವನಿಯೆತ್ತಿದ್ದೇನೆ. ಕ್ಷೇತ್ರವನ್ನು ಅಪವಿತ್ರ ಗೊಳಿಸಲು ಮುಂದಾದಂತ ಕಿಡಿಗೇಡಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿರುವುದಾಗಿ ಹೇಳಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19