“ದ್ವೇಷ ಹರಡುವ ಶಕ್ತಿಗಳ ವಿರುದ್ಧ ಸಂಘಟಿತರಾಗಿ“


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಮಂಗಳೂರು: ಸಮಾಜದಲ್ಲಿ ವಿಚಿತ್ರಕಾರಿ ಶಕ್ತಿಗಳು ಸಾಮರಸ್ಯವನ್ನು ಕದಡುವ ಮೂಲಕ ದ್ವೇಷವನ್ನು ಹರಡಿ ರಾಜಕೀಯ ಶಕ್ತಿ ಪಡೆದು ಅಧಿಕಾರ ಪಡೆಯಲು ಹೆಚ್ಚು ಒತ್ತು ನೀಡುತ್ತಿವೆ. ಇದು ದೇಶದ ಭವಿಷ್ಯಕ್ಕೆ ಗಂಡಾತರವಾಗಿದ್ದು, ಇದರ ವಿರುದ್ಧ ಸಂಘಟಿತರಾಗಿ ಧ್ವನಿ ಎತ್ತಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.

79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡುತ್ತಿದ್ದರು.

ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ರಕ್ಷಣೆ ಮಾಡಿ ಜಾಗೃತಿ ಮೂಡಿಸುವ ಜವಾಬ್ದಾರಿ ಯುವಕರ ಮೇಲಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದರು.

ಭಾರತೀಯರನ್ನು ಗುಲಾಮಗಿರಿಯಿಂದ ಮುಕ್ತಿಗೊಳಿಸಿ ದೇಶಕ್ಕೆ ಸ್ವಾತಂತ್ರ್ಯ ಪ್ರಾಪ್ತಿಯಾಗಲು ಮಹಾತ್ಮ ಗಾಂಧೀಜಿ ಅವರು ಮುಖ್ಯ ಭೂಮಿಕೆಯಲ್ಲಿದ್ದರು. ಜವಾಹರ ಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ಚಂದ್ರ ಬೋಸ್, ಮೌಲಾನ ಆಝಾದ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಮಹೋನ್ನತ ಕೊಡುಗೆ ನೀಡಿದ್ದಾರೆ. ದೇಶದ ಐಕ್ಯತೆಗಾಗಿ ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು ಎಂದು ಸ್ಮರಿಸಿದರು.

ಈ ಸಂದರ್ಭ ಶಾಸಕ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ಮೇಯರ್ ಸುರೇಶ್ ಬಳ್ಳಾಲ್, ಡಿಸಿಸಿ ಉಪಾಧ್ಯಕ್ಷರಾದ ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ಅಪ್ಪಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಬ್ಲಾಕ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ನವೀನ್ ಡಿ ಸೌಝ, ಕೆ ಪಿ ತೋಮಸ್, ಮುಖಂಡರಾದ ವಿಶ್ವನಾಥ್ ಬಜಾಲ್, ಲುಕ್ಮಾನ್ ಬಂಟ್ವಾಳ್, ಜಯಶೀಲ ಅಡ್ಯಂತಾಯ, ಹಯಾತುಲ್ಲಾ ಖಾಮಿಲ್, .ಟಿ.ಕೆ.ಸುಧೀರ್, ಟಿ.ಡಿ.ವಿಕಾಸ್ ಶೆಟ್ಟಿ, ಶಬ್ಬೀರ್.ಎಸ್, ಭಾಸ್ಕರ್ ರಾವ್, ಗಿರೀಶ್ ಶೆಟ್ಟಿ ಕದ್ರಿ, ಸಬಿತಾ ಮಿಸ್ಕಿತ್, ಚಂದ್ರಕಲಾ ಜೋಗಿ, ಗೀತಾ ಅತ್ತಾವರ, ಡೇನಿಸ್ ಡಿ ಸೌಝ, ಶೈಲಾ ನೀತು ಡಿಸೋಜಾ, ರಮಾನಂದ ಪೂಜಾರಿ, ಇ.ಕೆ.ಹುಸೈನ್, ಆಲ್ವಿನ್ ಪ್ರಕಾಶ್, ಲಕ್ಷ್ಮಣ್ ಶೆಟ್ಟಿ, ಅಬ್ದುಲ್ ಸಲೀಂ ಪಾಂಡೇಶ್ವರ, ದುರ್ಗ ಪ್ರಸಾದ್, ಹಬೀಬುಲ್ಲಾ ಕಣ್ಣೂರು, ಪೃಥ್ವಿ ರಾಜ್ ಪೂಜಾರಿ, ಗೀತಾ ಪ್ರವೀಣ್, ಫಯಾಝ್ ಅಮ್ಮೆಮ್ಮಾರ್, ಸೌಹನ್ ಎಸ್.ಕೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಧ್ವಜ ಪ್ರಭಾರಿಯಾಗಿ ನಿರ್ವಹಿಸಿದರು.

error: Content is protected !!