ನವದೆಹಲಿ: ದೆಹಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ದೆಹಲಿ ಪೊಲೀಸರು, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ (DPS), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ದ್ವಾರಕಾದ ಸೆಕ್ಟರ್ 10 ರಲ್ಲಿರುವ ಶ್ರೀರಾಮ್ ವರ್ಲ್ಡ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ದೂರು ಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ತಂಡ ವಿದ್ಯಾರ್ಥಿಗಳನ್ನು ಶಾಲೆಗೆ ಬರದಂತೆ ಸೂಚನೆ ನೀಡಿದ್ದು ಜೊತೆಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಹಲವಾರು ಬೆದರಿಕೆಗಳು ಬಂದಿದ್ದು ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿರಲಿಲ್ಲ ಆದರೂ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಆವರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19