ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೊಕ್ಕೊಟ್ಟಿನಲ್ಲಿ ಶನಿವಾರ(ಆ.16) ನಡೆದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಪೊಲೀಸ್ ಪೇದೆಗೆ ಅಶ್ಲೀಲ ಕೈ ಸನ್ನೆ ಮಾಡಿ, ಸೊಂಟಕ್ಕೆ ಕೈ ಹಾಕಿ ಮಾನಭಂಗ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿ.
ಶನಿವಾರ ರಾತ್ರಿ 11:50ರ ಸುಮಾರಿಗೆ ನಡೆದ ಶೋಭಾಯಾತ್ರೆಯಲ್ಲಿ, ನಾಸಿಕ್‌ನಲ್ಲಿ ಬಂದಿದ್ದ ಬ್ಯಾಂಡ್ ತಂಡದ ಕೆಲವು ಯುವಕರು ಮೆರವಣಿಗೆಯನ್ನು ಮುಂದೆ ಸಾಗದಂತೆ ತಡೆದು, ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ನಡೆದಾಡಲು ತೊಂದರೆ ಉಂಟುಮಾಡಿದ್ದರು. ಈ ವೇಳೆ, ಕರ್ತವ್ಯದಲ್ಲಿದ್ದ ಇಬ್ಬರು ಮಹಿಳಾ ಪೊಲೀಸ್ ಪೇದೆಗಳು ಯುವಕರಿಗೆ ಮುಂದೆ ಸಾಗುವಂತೆ ಸೂಚಿಸಿದಾಗ, ಆರೋಪಿಗಳು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಒಬ್ಬ ಮಹಿಳಾ ಪೇದೆಗೆ ಅಶ್ಲೀಲ ಸನ್ನೆ ಮಾಡಿದ್ದಲ್ಲದೆ, ದೈಹಿಕವಾಗಿ ಸಂಪರ್ಕಿಸಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ
ಸ್ಥಳದಲ್ಲಿದ್ದ ಇತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ವಶಕ್ಕೆ ಪಡೆದರು. ತೊಕ್ಕೊಟ್ಟು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಮಾನಭಂಗ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19