ಬಂಟರ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ: ಹೈಜಂಪ್‌ ಪಟು ರೋಹಿತ್ ಕುಮಾರ್ ಕಟೀಲು

ಮಂಗಳೂರು: ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವದಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುವಂತಾಗಲಿ ಎಂದು ಅಂತರ್‌ರಾಷ್ಟ್ರೀಯ ಹೈಜಂಪ್‌ಪಟು ರೋಹಿತ್ ಕುಮಾರ್ ಕಟೀಲು ಹೇಳಿದರು.

ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಬಂಟ ಕ್ರೀಡೋತ್ಸವ-2025 ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಶುಭ ಹಾರೈಸಿದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾ ಪಟು ಅಪ್ಸರಾ ರೋಹಿತ್ ಕುಮಾರ್, ಉದ್ಯಮಿಗಳಾದ ಸುಧಾಕರ ಶೆಟ್ಟಿ ಮುಗ್ರೋಡಿ, ಸಂಜಿತ್ ಶೆಟ್ಟಿ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನದ ಟ್ರಸ್ಟಿಗಳಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಡಾ.ಆಶಾಜ್ಯೋತಿ ರೈ ,ಡಾ. ಸಂಜೀವ ರೈ, ಮಾತೃ ಸಂಘದ ಕೋಶಾಧಿಕಾರಿ ಸಿ.ಎ. ರಾಮ ಮೋಹನ್ ರೈ, ಶಾಲಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೋಹಿತ್ ಕುಮಾರ್ ಕಟೀಲ್ ದಂಪತಿಯನ್ನು ಅಭಿನಂದಿಸಲಾಯಿತು. ಯುವ ಕ್ರೀಡಾ ಪ್ರತಿಭೆಗಳಾದ ನಿಷ್ಕಾ ರೈ ಹಾಗೂ ದೇವಿಕಾ ಆಳ್ವ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕೂಟದ ಸಂಚಾಲಕ ಕಿರಣ್ ಪಕ್ಕಳ ಪೆರ್ಮಂಕಿಗುತ್ತು ಸ್ವಾಗತಿಸಿದರು. ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ನಿರೂಪಿಸಿದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!