ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಉಡುಪಿ ಮೂಲದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆ.
ಉಡುಪಿ ಮೂಲದ ಸುಜನ್ ಮತ್ತು ಆದರ್ಶ್ ಬಂಧಿತರು.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಈ ಹಿಂದೆ ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ 7 ಮಂದಿಯನ್ನು ಬಂಧಿಸಲಾಗಿತ್ತು.
ಇತ್ತೀಚೆಗೆ ರಮ್ಯಾ ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆನ್ನುವ ನಿಟ್ಟಿನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಕೆಲ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲವಾಗಿ ಸಂದೇಶ ಹಾಗೂ ಕಮೆಂಟ್ ಮಾಡಿದ್ದರು.