ಸರಗಳ್ಳ ಪೊಲೀಸ್‌ ಬಲೆಗೆ: ಸೊತ್ತು ವಶ

ಉಪ್ಪಿನಂಗಡಿ: ಸರಗಳ್ಳತನದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ್ದಾರೆ. ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿಯಾಗಿದ್ದು, ಈತ ಪುತ್ತೂರಿನ ನೆಕ್ಕಿಲಾಡಿ ಎಂಬಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಕಳೆದ ಜೂ.4ರಣದಯ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಆಗಂತುಕರಿಬ್ಬರು ಎಳೆದು ಬಲವಂತವಾಗಿ ಕಸಿದುಕೊಂಡು ಹೋಗಿದ್ದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 48-2025 ಕಲಂ 309(4)ಬಿಎನ್‌ಎಸ್ ಅಡಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಯಿಂದ ಅಂದಾಜು ರೂ 4,54,000 ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು ರೂ. ,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಬೈಕ್‌ ಕಳವಾದ ಬಗ್ಗೆ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ಪತ್ತೆಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯ ತಂಡವು ಕಾರ್ಯಚರಣೆ ನಡೆಸಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!