ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್!

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಬಗ್ಗೆ ಸಾಮಾಜಿಕ ತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದ ಮೇರೆಗೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಳಾಧ್ಯಕ್ಷ ರಾಜೀವ ಕುಲಾಲ್ ಅವರ ದೂರಿನಿಂತೆ ಬ್ರಹ್ಮಾವರ ಪೊಲೀಸರು ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ 196 (1),352, 353(2) BNSರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 16 ರಂದು ವೀಡಿಯೋ ಮಾಡಿ ಪಕ್ಷದ ಹಿರಿಯರು, ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ  ದ್ವೇಷ ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ರಾಜೀವ ಕುಲಾಲ್ ದೂರು ನೀಡಿದ್ದರು.

ಮತ್ತೊಂದು ಪ್ರಕರಣ


ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ ಬಳಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಕೋಟ ವಸಂತ ಗಿಳಿಯಾರ್‌ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿ ಧರ್ಮ – ಧರ್ಮಗಳ ಮಧ್ಯೆ ಎತ್ತಿಕಟ್ಟಿ ಕೋಮು ಗಲಭೆ ಸೃಷಿಸುವ ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡಲಾಗಿದೆ. ಇದೇ ಪೇಸ್‌ಬುಕ್‌ ಪೋಸ್ಟ್‌ನ್ನು ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶರತ್ ಶೆಟ್ಟಿ ವಡ್ಡರ್ಸೆ ಎಂಬುವರು ರೀ ಪೊಸ್ಟ್‌ ಮಾಡಿದ್ದು ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ 96(1)(a), 353(2) BNSರಂತೆ ಪ್ರಕರಣ ದಾಖಲಿಸಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!