ಬೆಳಗಾವಿ: ಬಿಮ್ಸ್ ನ ವೈದ್ಯಕೀಯ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಇಂದು(ಆ.19) ಬೆಳಗ್ಗೆ ನಡೆದಿದೆ.
ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಪ್ರಿಯಾ(27) ಎಂದು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.
ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಸ್ಥಳಕ್ಕೆ ಬಿಮ್ಸ್ ನಿರ್ದೇಶಕ ಅಶೋಕಕುಮಾರ ಶೆಟ್ಟಿ ಭೇಟಿ ನೀಡಿದರು. ಪ್ರಿಯಾ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿದೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.