ಬೆಂಗಳೂರು: ನೋಂದಣಿ ವಿವಾಹ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ ವಂಚಿಸಿದ ಉತ್ತರ ಪ್ರದೇಶದ ಮಾಜಿ ಶಾಸಕನನ್ನು ಬೆಂಗಳೂರು ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾಜಿ ಶಾಸಕ ಶ್ರೀಭಗವಾನ್ ಶರ್ಮಾ(51) ಬಂಧಿತ ಆರೋಪಿ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಉತ್ತರಪ್ರದೇಶದ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಆರೋಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಭಗವಾನ್ ಶರ್ಮಾ ಮತ್ತು ದೂರುದಾರ ಮಹಿಳೆ ಉತ್ತರಪ್ರದೇಶದ ರಾಜಕೀಯ ನಾಯಕರಾಗಿದ್ದಾರೆ. ಇಬ್ಬರು ಆತ್ಮೀಯರಾಗಿದ್ದು, ಆ.14ರಂದು ಮಹಿಳೆ ಮತ್ತು ಆಕೆಯ ಪುತ್ರನ ಜತೆ ರಾಜ್ಯ ಪ್ರವಾಸಕ್ಕೆ ಬಂದ ಶ್ರೀಭಗವಾನ್ ನಗರದ ಹೋಟೆಲ್‌ನಲ್ಲಿ ತಂಗಿದ್ದು, ಈ ವೇಳೆ ರಿಜಿಸ್ಟರ್ಡ್ ಮ್ಯಾರೇಜ್ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಅಲ್ಲದೆ, ಪ್ರಾಣ ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಮಹಿಳೆ ಆರೋಪಿಸಿದ್ದರು.