ಬೆಂಗಳೂರು: ಸಂಜಯನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಟೆಕಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ(ಆ.20) ನಡೆದಿದೆ.
ಸಂಜಯ್ ನಗರದ ಗೆದ್ದಲಹಳ್ಳಿ ನಿವಾಸಿ ರೋಷನ್ (37) ಮೃತ ವ್ಯಕ್ತಿ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ರೋಷನ್ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಮಗು ಮತ್ತು ಪತ್ನಿಗೆ ಉಪಾಹಾರ ತರಲು ಬೈಕ್‌ನಲ್ಲಿ ಹೋಗುವಾಗ ಬಲಭಾಗದಿಂದ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಕೆಳಗೆ ಬಿದ್ದ ಅವರ ಮೇಲೆ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರೋಷನ್ ಹೆಲ್ಮೆಟ್ ಧರಿಸಿದ್ದರು. ಹೀಗಾಗಿ ತಲೆಗೆ ಯಾವುದೇ ಗಾಯವಾಗಿಲ್ಲ. ಆದರೆ ದೇಹದ ಮೇಲೆ ಬಸ್ ಹರಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಸಂಬಂಧ ಬಸ್ ಚಾಲಕ ಕಲ್ಲಪ್ಪ ಮುಚಡಿ ಅವರನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಂಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.