ರಾಮನಗರ: ಕೆಸ್ತೂರು ಬಳಿಯ ದುಂಡನಹಳ್ಳಿ ಗ್ರಾಮದ ನಿವಾಸಿಯೊಬ್ಬನನ್ನು ದೇವಸ್ಥಾನದ ಕಳವು ಆರೋಪದ ಮೇಲೆ ಬಂಧಿಸಲಾಗಿದ್ದು, ಈತ ಠಾಣೆಯ ಶೌಚಾಲಯದಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ರಮೇಶ್ ಎಂಬಾತ ಠಾಣೆಯಲ್ಲೇ ನೇಣಿಗೆ ಶರಣಾದ ಆರೋಪಿ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಕಳೆದೆರಡು ದಿನಗಳ ಹಿಂದೆ ಬೊಮ್ಮನಾಯಕನಹಳ್ಳಿ ದೇವಸ್ಥಾನದ ಕಳ್ಳತನದ ಆರೋಪದ ಮೇಲೆ ಚನ್ನಪಟ್ಟಣ ತಾಲೂಕಿನ ಎಂಕೆ ದೊಡ್ಡಿ ಪೊಲೀಸರು ಇತನನ್ನು ಹಾಗೂ ಇತನ ಮಗ ಮಂಜು ಮತ್ತು ಕೋಲಾರದ ಅನಿಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯದ ಅನುಮತಿ ಪಡೆದು ವಿಚಾರಣೆ ನಡೆಸುತ್ತಿದ್ದರು.
ಇಂದು(ಆ.20) ಬೆಳಿಗ್ಗೆ ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಹೋದಾತ ನೇಣು ಬೀಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ. ಕುಟುಂಬಸ್ಥರು ಇದು ಲಾಕಪ್ ಡೆತ್ ಎಂದು ಅರೋಪಿಸುತ್ತಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಇರಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದಾರೆ.