ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ!

ಮಂಗಳೂರು: ಧರ್ಮಸ್ಥಳ ಗ್ರಾಮದ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ಸಮಯಗಳಿಂದ ಭಾರೀ ಸುದ್ದಿಯಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯಲು ಉಡುಪಿ ಪೊಲೀಸರು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವು ಹೊತ್ತು ವಾದ ವಿವಾದ ನಡೆದ ಬಳಿಕ ತಿಮರೋಡಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ ಅವರನ್ನು ಪೊಲೀಸವರು ವಶಕ್ಕೆ ಪಡೆದಿದ್ದಾರೆ  ಎನ್ನಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಎಎಸ್ಪಿ ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ 9 ಪೊಲೀಸ್ ವಾಹನದಲ್ಲಿ  ಗ್ರಾಮಾಂತರ ಠಾಣಾ ಎಸ್ಐಗಳು, ಪೊಲೀಸ್ ಸಿಬ್ಬಂದಿಯನ್ನೊಳಗೊಂಡ ಉಡುಪಿ ಪೊಲೀಸರ ತಂಡ  ಆಗಮಿಸಿತ್ತು.

ಬಿ.ಎಲ್‌ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ  ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್ ಎಂಬವರು, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ  ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!