ಕುಂದಾಪುರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸುಮಾರು 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಗರ ತಾಲೂಕು ನಿವಾಸಿ ನಾಸೀರ್ ಖಾನ್ (52) ಬಂಧಿತ ಆರೋಪಿ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಸಮನ್ಸ್ ಜಾರಿಯಾದರೂ, ಆರೋಪಿ ಎರಡು ದಶಕಗಳಿಗೂ ಹೆಚ್ಚು ಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ವಿಶ್ವಾಸಾರ್ಹರ ಮಾಹಿತಿಯ ಮೇರೆಗೆ, ಎಚ್‌ಸಿ ಕೃಷ್ಣ, ಪಿಸಿ ಪ್ರಸನ್ನ ಮತ್ತು ಪಿಸಿ ಸಂದೀಪ್ ಕುರಾನಿ ಅವರನ್ನೊಳಗೊಂಡ ಪೊಲೀಸ್ ತಂಡವು ಬುಧವಾರ(ಆ.20) ರಂದು ಸಾಗರ ತಾಲೂಕಿನ ಆನಂದಪುರದಲ್ಲಿ ನಾಸೀರ್ ಖಾನ್ ನನ್ನು ಬಂಧಿಸಿದರು.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 498 ಎ, 504, 506(2) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3, 4, 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಆರೋಪಿಯನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.