ತಿಮರೋಡಿ ಪೊಲೀಸ್‌ ವಶವಾದ ಬೆನ್ನಲ್ಲೇ ನಿಷೇಧಾಜ್ಞೆ ಜಾರಿ!

ಉಡುಪಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶವಾದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯನ್ನು ಆಧರಿಸಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ನಾಳೆ ಮಧ್ಯಾಹ್ನ 1.00 ಗಂಟೆಯ ವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

 

error: Content is protected !!