ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!

ಬಂಟ್ವಾಳ: ನಗರದ ಅಪ್ರಾಪ್ತ ಬಾಲಕನ ಮೇಲೆ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಪಿಲಿಮೋನು ಎಂಬಾತ ಲೈಂಗಿಕ ದೌರ್ಜನ್ಯ ನೀಡಿರುವುದಾಗಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.

ಬಾಲಕ ಕೂದಲು ಕಟ್ ಮಾಡುವುದಕ್ಕೆ ಸೆಲೂನ್ ಗೆ ಹೋಗುತ್ತಿದ್ದ ವೇಳೆ ಆರೋಪಿ ಪಿಲಿಮೋನು ಬಾಲಕನನ್ನು ತನ್ನ ಸ್ಕೂಟರ್ ನಲ್ಲಿ ಬಲವಂತವಾಗಿ ಒಂದು ಕಡೆ ಕರೆದುಕೊಂಡುಕೊಂಡು ಹೋಗಿ, ಅಲ್ಲಿ ಯಾರೂ ಇಲ್ಲದ ಕಾರಣ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ನೊಂದ ಬಾಲಕನ ತಾಯಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 

error: Content is protected !!