ಉಳ್ಳಾಲದಲ್ಲಿ ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು !

ಉಳ್ಳಾಲ: ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಕುಂಪಲ ಚೇತನನಗರ ನಿವಾಸಿ ಲೋಕೇಶ್ (48) ಮೃತ ವ್ಯಕ್ತಿ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ತೊಕ್ಕೊಟ್ಟಿನಲ್ಲಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಲೋಕೇಶ್ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ(ಆ.15) ರಂದು ಸಂಜೆ ಪಾಳಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಪಿಕಾಡು ಎಂಬಲ್ಲಿ ಹೆದ್ದಾರಿ ದಾಟುತ್ತಿದ್ದಾಗ ಏಕಾಏಕಿ ಬೈಕ್ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!