ಧರ್ಮಸ್ಥಳ ಪ್ರಕರಣ: ಸುಜಾತ ಭಟ್‌ಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್

ಮಂಗಳೂರು: ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಎಂದು ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿದ್ದು, ಇದೀಗ ಅನನ್ಯಾ ಭಟ್‌ ಅವರ ಪೂರ್ವಾಪರ ತಿಳಿದುಕೊಳ್ಳಲು ಎಸ್‌ಐಟಿ ತಂಡ ಮುಂದಾಗಿದೆ. ಈ ಬೆನ್ನಲ್ಲೇ ಸುಜಾತಾ ಭಟ್‌ಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದೆ.

ತಮ್ಮ ಮಗಳು ಅಂತ ಸುಜಾತಾ ಭಟ್ ಫೋಟೋ ರಿಲೀಸ್ ಮಾಡುತ್ತಿದ್ದಂತೆ ಸಾಕಷ್ಟು ಊಹಾಪೋಹಾಗಳು ಎದ್ದಿದ್ದು, ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

ಸುಜಾತ ಭಟ್‌ ತೋರಿಸಿರುವ ಫೋಟೋವನ್ನು ಕಂಡು ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಅಂತ ಸುಜಾತ ಭಟ್‌ ಮೇಲೆ ಆರೋಪ ಮಾಡಿದ್ದರು. ಹಾಗಾಗಿ ಎಸ್‌ಐಟಿ ತಂಡವು ಸುಜಾತ ಭಟ್‌ ಅವರ ಪೂರ್ವಪರ ಮಾಹಿತಿಯನ್ನು ತಿಳಿದುಕೊಳ್ಳಲು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸುಜಾತಾ ಭಟ್‌ ಅವರಿಗೆ ನೋಟಿಸ್‌ ನೀಡಿದೆ. ಬೆಳ್ತಂಗಡಿ ಕಚೇರಿ ಸಿಬ್ಬಂದಿ ಬೆಂಗಳೂರಿಗೆ ಬಂದು ನೋಟಿಸ್‌ ಜಾರಿಮಾಡಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಈಗಾಗಲೇ ಅನನ್ಯಾ ಭಟ್ ಅಸ್ತಿತ್ವದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗ, ಬೆಂಗಳೂರು, ಉಡುಪಿಯಲ್ಲಿ ದಾಖಲೆ ಸಂಗ್ರಹಿಸಿದೆ ಎಂದು ವರದಿಯಾಗಿದೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!