ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಆ. 23ರಂದು ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆಯಲಿದೆ.
ತಿಮರೋಡಿಯವರು ಹಿರಿಯಡ್ಕ ಜೈಲಿನಲ್ಲಿದ್ದು, ಶುಕ್ರವಾರ ಇವರನ್ನು ಭೇಟಿಯಾಗಲು ಹಲವಾರು ಮಂದಿ ಯತ್ನಿಸಿದರೂ, ಪೊಲೀಸರು ಯಾರಿಗೂ ಅವಕಾಶ ನೀಡಲಿಲ್ಲ. ಶನಿವಾರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೂ ತಿಮರೋಡಿಯನ್ನು ಕರೆತರುವುದು ಅನುಮಾನ ಎನ್ನಲಾಗುತ್ತಿದೆ. ಜೈಲಿನಲ್ಲಿ ಅವರ ಆರೋಗ್ಯ ತಪಾಸಣೆ ಮುಂದುವರಿದಿದೆ ಎಂಬ ಮಾಹಿತಿ ಲಭಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19