ನ್ಯೂಯಾರ್ಕ್: ಭಾರತೀಯರು ಸೇರಿದಂತೆ ವಿದೇಶಿ ಪ್ರಜೆಗಳಿದ್ದ ಪ್ರವಾಸಿ ಬಸ್ಸೊಂದು ಪಲ್ಟಿಯಾಗಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಮೂವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ (ಆ.22)ದಂದು ನ್ಯೂಯಾರ್ಕ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಬಸ್ಸಿನಲ್ಲಿ ಭಾರತೀಯರು, ಚೈನೀಸ್ ಮತ್ತು ಫಿಲಿಪಿನೋ ಪ್ರಜೆಗಳು ಸೇರಿದಂತೆ ಸುಮಾರು ಐವತ್ತು ಪ್ರವಾಸಿಗರಿದ್ದರು ಎಂದು ಹೇಳಲಾಗಿದೆ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಪ್ರವಾಸಿ ಬಸ್ಸು ನಯಾಗರ ಜಲಪಾತವನ್ನು ವೀಕ್ಷಿಸಿದ ನಂತರ ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ ಬಫಲೋದಿಂದಾಗಿ ನ್ಯೂಯಾರ್ಕ್ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಪರಿಣಾಮ ಕೆಲವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು 30ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, 5 ಮಂದಿ ಮೃತಪಟ್ಟಿರುವುದಾಗಿ ನ್ಯೂಯಾರ್ಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಎರಿ ಕೌಂಟಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ, ಘಟನೆ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ನ್ಯೂಯಾರ್ಕ್ ರಾಜ್ಯ ಪೊಲೀಸ್ ಕಮಾಂಡರ್ ಆಂಡ್ರೆ ರೇ ಮೇಜರ್ ಹೇಳಿದ್ದಾರೆ.