ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರು ನೀಡಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್ಐಟಿ ಶನಿವಾರ (ಆ.23) ಬಂಧಿಸಿದೆ. ಈ ಬಗ್ಗೆ ಉಡುಪಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ದೃಢಪಡಿಸಿದ್ದಾರೆ.
ಎಸ್‌ಐಟಿ ಮತ್ತು ಅದರ ಮುಖ್ಯಸ್ಥರಾಗಿರುವ ಪ್ರಣವ್ ಮೊಹಂತಿ ಅವರು ಶುಕ್ರವಾರ ತಡರಾತ್ರಿವರೆಗೆ ದೂರುದಾರರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಮುಸುಕುದಾರಿಯ ಹೆಸರು ಬಹಿರಂಗಪಡಿಸಲಾಗಿಲ್ಲ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ದೂರುದಾರ ಪ್ರಕರಣದಲ್ಲಿ ನೀಡಿದ ಹೇಳಿಕೆಗಳು ಮತ್ತು ಒದಗಿಸಿದ ದಾಖಲೆಗಳಗಲ್ಲಿ ಹೊಂದಾಣಿಕೆ ಕಂಡುಬರದ ಹಿನ್ನೆಲೆಯಲ್ಲಿ ಆತನನ್ನು ಬಂಧನ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ SIT ತನ್ನ ತನಿಖೆಯನ್ನು ಮುಂದುವರೆಸಿದೆ. ದೂರುದಾರ – ಸಾಕ್ಷಿಯನ್ನು ದೀರ್ಘ ಗಂಟೆಗಳ ವಿಚಾರಣೆಯ ನಂತರ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮುಸುಕುದಾರಿ ವ್ಯಕ್ತಿಯ ಬಂಧನ ಕುರಿತಂತೆ ಉಡುಪಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ದೂರುದಾರನ ಬಂಧನ ಆಗಿರುವುದು ನಿಜ, ಆತ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರೆಸುತ್ತಾರೆ. ಎಸ್ಐಟಿ ಕಡೆಯಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ತಿಳಿಸಿದರು.