ನೇಜಾರು ತಾಯಿ-ಮಕ್ಕಳ ಕೊಲೆ ಪ್ರಕರಣ: ಸೆ.12ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ-ಮೂವರು ಮಕ್ಕಳ ಕೊಲೆ ಪ್ರಕರಣ ಮೂರು ಸಾಕ್ಷಿಗಳ ಪೈಕಿ ಪ್ರಕರಣದ ದೂರುದಾರೆ ಐಫಾ ಅವರ ಪಾಟಿ ಸವಾಲು ಗುರುವಾರ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.

ಆರೋಪಿ ಪರ ವಕೀಲ ರಾಜು ಪೂಜಾರಿ ಪ್ರಕರಣದ ದೂರುದಾರೆ ಐಫಾ ಅವರ ಪಾಟಿ ಸವಾಲು ನಡೆಸಿದರು.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಸಮಯಾವಕಾಶದ ಕೊರತೆಯ ಹಿನ್ನೆಲೆಯಲ್ಲಿ ಸಾಕ್ಷಿದಾರರಾದ ದೂರುದಾರೆಯ ತಾಯಿ ಶಾಹಿನ್ ಬೀಬಿ ಮತ್ತು ಆಟೋ ರಿಕ್ಷಾ ಚಾಲಕ ಶ್ಯಾಮ್ ಅವರ ಪಾಟಿ ಸವಾಲು ಪ್ರಕ್ರಿಯೆಯನ್ನು ಸೆ.12ಕ್ಕೆ ನ್ಯಾಯಾಧೀಶ ಸಮೀವುಲ್ಲ ಅವರು ಮುಂದೂಡಲಾಗಿದೆಂದು ಆದೇಶ ನೀಡಿದರು.

ಆರೋಪಿ ಪ್ರವೀಣ್ ಚೌಗಲೆಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು ಹಾಗೂ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ಹಾಜರಿದ್ದರು.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!