ಬೆಂಗಳೂರು : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ನ ಬಳ್ಳಾರಿ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಭಾನುವಾರ (ಆ.24) ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಬಳ್ಳಾರಿಯ ಕೌಲಬಜಾರ್ ವ್ಯಾಪ್ತಿಯ ಬಂಡಿ ಹಟ್ಟಿ ಪ್ರದೇಶದಲ್ಲಿರುವ ಮನೆಯಲ್ಲಿದ್ದ ಸಮೀರ್, 2011ರಲ್ಲಿ ಕುಟುಂಬ ಸಮೇತ ಬಳ್ಳಾರಿ ತೊರೆದಿದ್ದರು. ಆದರೆ ಆಧಾರ್ ಕಾರ್ಡ್ ನಲ್ಲಿ ಸಮೀರ್ ವಿಳಾಸ ಈವರೆಗೂ ಬಳ್ಳಾರಿ ಎಂದು ನಮೂದಾಗಿರೋ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರು ಮತ್ತು ಬಳ್ಳಾರಿ ನಿವಾಸಕ್ಕೆ ನೋಟಿಸ್ ಅಂಟಿಸಿದ್ದಾರೆ.
ಮೊದಲಿಗೆ ಸೌಜನ್ಯ ಬಗ್ಗೆ ವಿಡಿಯೋ ಮಾಡಿದ್ದಾಗ ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಲೂ ಇದೇ ಮನೆಗೆ ಬಂದಿದ್ದ ಪೊಲೀಸರು ನಂತರ ಬೆಂಗಳೂರಿಗೆ ತೆರಳಿ ನೋಟಿಸ್ ಕೊಟ್ಟಿದ್ದರು.