ಬೆಳ್ತಂಗಡಿ: ಯೂಟ್ಯೂಬರ್ ಸಮೀರ್.ಎಂ.ಡಿ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಇಂದು ಮಧ್ಯಾಹ್ನ ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆ ಸಮೀರ್ ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ಇಂದು ವಿಚಾರಣೆಗಾಗಿ ವಕೀಲರೊಂದಿಗೆ ಬೆಳ್ತಂಗಡಿ ಸರ್ಕಲ್ ಇನ್ ಸ್ಪೆಕ್ಟರ್ ನಾಗೇಶ್ ಅವರ ಕಚೇರಿಗೆ ಹಾಜರಾಗಿದ್ದಾರೆ.