ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು !

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ಭಾನುವಾರ(ಆ.24) ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊರ್ವನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ.

ಕೊಪ್ಪಲಂಗಡಿ ನಿವಾಸಿ ಪೀರು ಸಾಹೇಬ್ (70) ಮೃತ ವ್ಯಕ್ತಿ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ  ಲಿಂಕ್ ಬಳಸಿಕೊಳ್ಳಿ👇

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗದಿಂದ ಬಂದು ರಸ್ತೆ ದಾಟಲು ನಿಂತಿದ್ದ ಪೀರು ಸಾಹೇಬ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರನ್ನು ಆಸ್ಪತ್ರೆಗೆ ಸಾಗಿಸಲು ಉಡುಪಿ ಎಸ್‌ಡಿಪಿಐ ಅಂಬ್ಯುಲೆನ್ಸ್ ಸಹಕರಿಸಿತು.

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!