ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ ವ್ಯಕ್ತವಾಗಿದೆ.
ಹಾಸನದ ಹೊಳೆನರಸೀಪುರ ಬಳಿಯ ಹರಳಹಳ್ಳಿ ಗ್ರಾಮದಲ್ಲಿ ಹೇಮಾವತಿಯ ಎಡದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ನಾಲ್ವರಲ್ಲಿ ಇಬ್ಬರು ಸಾವನ್ನಪ್ಪಿದದರೇ, ಮತ್ತಿಬ್ಬರು ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ನದಿ ನಾಲೆಯಲ್ಲಿ ಕಾರೊಂದು ಕಂಡಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಇನ್ನಿಬ್ಬರು ಕೊಚ್ಚಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಅವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇