ಮಂಗಳೂರು: ಯಾವುದೇ ಸಮಸ್ಯೆಗಳಿಲ್ಲದ ಉತ್ತಮ ಸಮಾಜ ರೂಪುಗೊಳ್ಳಲು ಪ್ರತಿಯೊಬ್ಬ ನಾಗರೀಕರು ಅಗತ್ಯ ಕಾನೂನು ಮಾಹಿತಿ ಹೊಂದಿರಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದ್ದಾರೆ.
ಅವರು ಶುಕ್ರವಾರ ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು. ಕಾನೂನು ಉಲ್ಲಂಘನೆಯ ಪರಿಣಾಮವನ್ನು ಅರಿತರೆ, ನಾವು ಯಾವುದೇ ಸಮಸ್ಯೆ ಉಂಟು ಮಾಡಲು ಸಾಧ್ಯವಿಲ್ಲ. ಇದರಿಂದ ಸಮಾಜವೂ ಸುಧಾರಣೆಗೊಂಡು, ನಾಗರೀಕರು ನೆಮ್ಮದಿಯಿಂದ ಬದುಕಬಹುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಖಾಯಂ ಜನತಾ ನ್ಯಾಯಾಲಯದ ಕುರಿತು ನ್ಯಾಯವಾದಿ ಫಝ್ಲುಲ್ ರಹಮಾನ್, ” ಮೂಲಭೂತ ಹಕ್ಕುಗಳು ಮತ್ತು ಮಧ್ಯಸ್ಥಿಕೆ ” ಕುರಿತು ಸಹಾಯಕ ಕಾನೂನು ಅಭಿರಕ್ಷಕಿ ಸುಪ್ರಿತಾ ಹಾಗೂ “ಮೂಲಭೂತ ಕರ್ತವ್ಯ ಗಳು ಮತ್ತು ಲೋಕ ಅದಾಲತ್” ಕುರಿತು ಸಹಾಯಕ ಕಾನೂನು ಅಭಿರಕ್ಷಕಿ ಅಶ್ವಿನಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕಿ ಯಶೋಧಾ ಉಪಸ್ಥಿತರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19