ಬೆಂಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕುಣಿಗಲ್ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬಿಜೆಪಿ ಶಾಸಕರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
KA -05-NJ-2449 ನಂಬರಿನ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಕಾರಿನಲ್ಲಿ ಶಾಸಕ ರಾಮಮೂರ್ತಿ ಸಹೋದರ ಮುರಳಿ ಇದ್ದರು ಎಂದು ಹೇಳಲಾಗುತ್ತಿದೆ.
ಈ ಘಟನೆ ಸಂಬಂಧ ಸಿ.ಕೆ ರಾಮಮೂರ್ತಿ ದೂರವಾಣಿ ಕರೆಯಲ್ಲಿ ಮಾತಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಗೆ ಅಪಘಾತವಾಗಿದೆ. ಆ ವ್ಯಕ್ತಿ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಿಂದ ಮಾಹಿತಿ ಪಡೆದಿದ್ದೇನೆ. ಕಾನೂನು ಪ್ರಕಾರ ಏನಿದೆ ಅದೇ ರೀತಿಯಲ್ಲಿ ಕ್ರಮ ಕೈಗೊಳ್ಳಲು ಹೇಳಿದ್ದೇನೆ. ಈಗಾಗಲೇ ನಮ್ಮ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮ ಸಹೋದರ ಇರುವ ಕಾರು ಅಪಘಾತ ಆಗಿಲ್ಲ. ನಮ್ದು ಮುರುಳಿದು ಒಂದೇ ನಂಬರಿನ ಕಾರು ಇದೆ. ವೇಣುಗೋಪಾಲ ಅಂತ ವ್ಯಕ್ತಿಯ ಕಾರು ಆ್ಯಕ್ಸಿಡೆಂಟ್ ಮಾಡಿದ್ದಾನೆ. ನಮ್ಮ ಕಾರುಗಳು ಹೋಗುವ ವೇಳೆಯಲ್ಲಿ ಬೈಕ್ನಲ್ಲಿ ಅಡ್ಡ ಬಂದಿದ್ದಾನೆ. ಸುಮಾರು 75 ವರ್ಷದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19