ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಹತ್ಯೆ !

 

ಕಾರ್ಕಳ: ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ(ಆ.25) ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇಂದು(ಆ.26) ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!