ಮಂಗಳೂರು: ಅನನ್ಯಾ ಭಟ್ ನಾಪತ್ತೆ ಪ್ರಕರಣದ ಸೃಷ್ಟಿಕರ್ತೆ ಸುಜಾತ ಭಟ್ ಬೆಳ್ಳಂಬೆಳಗ್ಗೆ 5 ಗಂಟೆಗೆ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್ ನೀಡಿದ್ದರು.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.
ಶುಕ್ರವಾರ ವಿಚಾರಣೆ ನಿಗದಿಯಾಗಿದ್ದರೂ ಇಂದು ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಇಬ್ಬರು ವಕೀಲರ ಜೊತೆ ಆಗಮಿಸಿದ್ದಾರೆ. ಸುಜಾತ ಭಟ್ ಬರುವಾಗ ಅಧಿಕಾರಿಗಳು ನಿದ್ದೆಯಲ್ಲಿದ್ದರು. ಕಚೇರಿಗೆ ಬಂದ ನಂತರ ಪೊಲೀಸರು ಸುಜಾತ ಭಟ್ ಅವರನ್ನು ಒಳಗಡೆ ಬರುವಂತೆ ಹೇಳಿದ್ದಾರೆ. ಸದ್ಯ ಈಗ ಸುಜಾತ ಭಟ್ ಎಸ್‌ಐಟಿ ಕಚೇರಿಯ ಒಳಗಡೆಯೇ ಇದ್ದಾರೆ.