ಧರ್ಮಸ್ಥಳ ಪ್ರಕರಣ: ದೂರುದಾರನನ್ನು ತಿಮರೋಡಿ ಮನೆಗೆ ಕರೆದೊಯ್ದ ಎಸ್ಐಟಿ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ಸಾಕ್ಷಿ ದೂರುದಾರನನ್ನು ಉಜಿರೆ ಬಳಿ ಇರುವ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ ಮಂಗಳವಾರ(ಆ.26) ಕರೆದೊಯ್ದು ತನಿಖೆ ನಡೆಸುತ್ತಿದೆ.

Mahesh Shetty Thimarody

ಸಾಕ್ಷಿಧಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಎಸ್ಐಟಿ ಅಧಿಕಾರಿಗಳು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿ ಮನೆಯಲ್ಲಿ ಮಹಜರು ನಡೆಸಲು ಆಗಮಿಸಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ ಎಂದಿದ್ದಾನೆ.

ವಿಧಿ ವಿಜ್ಞಾನ ತಜ್ಞರ ತಂಡ ಹಾಗೂ ಎಸ್ಐಟಿ ಅಧಿಕಾರಿಗಳ ಜೊತೆಗೆ ಸಾಕ್ಷಿದೂರುದಾರ ಕೂಡ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.

ಪೊಲೀಸ್‌ ವಾಹನಗಳ ಜೊತೆ ಮಾಧ್ಯಮಗಳ ವಾಹನಗಳು ತಿಮರೋಡಿಗೆ ತೆರಳಿತ್ತು. ಆದರೆ ಪೊಲೀಸರು ತಿಮರೋಡಿಗೆ ಹೋಗುವ ಮಾರ್ಗ ಮಧ್ಯೆಯೇ 1 ಕಿ.ಮೀ ದೂರದಲ್ಲಿ ಎಲ್ಲಾ ಮಾಧ್ಯಮಗಳ ವಾಹನಗಳನ್ನು ತಡೆದಿದ್ದಾರೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

error: Content is protected !!