ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ದಿರಾಂಗ್ ಮತ್ತು ತವಾಂಗ್ ನಡುವೆ ಬೆಟ್ಟ ಪ್ರದೇಶದಿಂದ ಏಕಾಏಕಿ ಭೂ ಕುಸಿತ ಸಂಭವಿಸಿದ ಪರಿಣಾಮ ಮಣ್ಣುಗಳ ಜೊತೆ ಭಾರಿ ಗಾತ್ರದ ಬಂಡೆ ಕಲ್ಲುಗಳು ರಸ್ತೆ ಮೇಲೆ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿರುವ ಘಟನೆ ಸೋಮವಾರ(ಆ.25) ಸಂಭವಿಸಿದೆ.
ಅಷ್ಟು ಮಾತ್ರವಲ್ಲದೆ ಭಾರಿ ಗಾತ್ರದ ಬಂಡೆಗಳು ಬಿದ್ದ ಪರಿಣಾಮ ರಸ್ತೆಯ ಮೇಲೆ ನಿಲ್ಲಿಸಿದ್ದ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಪರ್ವತ ಪ್ರದೇಶದಲ್ಲಿ ವಾಹನಗಳು ಸಂಚರಿಸುತ್ತಿರುವ ವೇಳೆ ಭೂ ಕುಸಿತ ಸಂಭವಿಸಿದೆ ಪರಿಣಾಮ ಘಟನೆಯಲ್ಲಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳದಲ್ಲಿದ್ದ ಪ್ರವಾಸಿಗರು ಭಯಭೀತರಾಗಿ ದೂರ ಓಡಿ ಬಂದಿದ್ದಾರೆ ಇದಾದ ಕೆಲವೇ ಹೊತ್ತಿನಲ್ಲಿ ಬೆಟ್ಟ ಪ್ರದೇಶದಲ್ಲಿ ಮಣ್ಣಿನ ಜೊತೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳು ರಸ್ತೆಯ ಮೇಲೆ ಉರುಳಿ ಬಿದ್ದಿದ್ದು, ಭಾರಿ ಗಾತ್ರದ ಕಲ್ಲುಗಳು ವಾಹನದ ಮೇಲೆ ಬಿದ್ದು ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿದೆ ಆದರೆ ವಾಹನದಲ್ಲಿದ್ದವರು ಹೊರ ಬಂದಿದ್ದರಿಂದ ದೊಡ್ಡ ಅಪಾಯ ತಪ್ಪಿದೆ.