ಮಂಗಳೂರು: “ಬಹುನಿರೀಕ್ಷಿತ ತುಳು ಸಿನಿಮಾ ನೆತ್ತೆರೆಕೆರೆ ತುಳು ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದ್ದು ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಆ.29ರಂದು ಕರಾವಳಿ ಜಿಲ್ಲೆಯಾದ್ಯಂತ ಸಿನಿಮಾ ತೆರೆಕಾಣಲಿದೆ” ಎಂದು ಸಿನಿಮಾ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಸಿನಿಮಾವನ್ನು ಮೊದಲು ಇಲ್ಲಿ ಬಿಡುಗಡೆ ಮಾಡಿದ ಬಳಿಕ ವಿದೇಶಗಳಲ್ಲಿ ಬಿಡುಗಡೆ ಮಾಡುವ ಕುರಿತು ಯೋಚನೆಯಿದೆ. ಸಿನಿಮಾ ಮಾಸ್ ಆಗಿದ್ದು ಜನರು ಇಷ್ಟಪಡುವುದರಲ್ಲಿ ಯಾವುದೇ ಸಂಶಯವಿಲ್ಲ” ಎಂದರು.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಸಿನಿಮಾದ ನಿರ್ದೇಶಕ ಸ್ವರಾಜ್ ಶೆಟ್ಟಿ ಮಾತಾಡಿ, ”ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ “ನೆತ್ತೆರೆಕೆರೆ” ತುಳು ಸಿನಿಮಾಕ್ಕೆ ಚೇಳಾಯರು, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣ ನಡೆದಿದೆ. ಸಿನಿಮಾಕ್ಕೆ ಚಿತ್ರಕತೆ ಬರೆದು ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕೊಂಡು ನಾಯಕನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಸಿನಿಮಾ ಡಿಫರೆಂಟ್ ಆಗಿದ್ದು ನಮಗೆ ಈ ಸಿನಿಮಾ ಗೆಲ್ಲುವ ವಿಶ್ವಾಸವಿದೆ. ತುಳುವರು ಸಿನಿಮಾ ಥಿಯೇಟರ್ ನಲ್ಲಿ ಸಿನಿಮಾ ನೋಡುವ ಮೂಲಕ ನಮ್ಮನ್ನು ಹರಸಬೇಕು“ ಎಂದು ಮನವಿ ಮಾಡಿದರು.
ಸಿನಿಮಾದಲ್ಲಿ ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್, ಲಂಚುಲಾಲ್ ಕೆ.ಎಸ್. ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳ್ಳಾರ್ , ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪೃಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ, ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಇದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್, ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸರ್: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ್ಲ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ಆಪ್ತ, ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆರ್ಟ್: ವಿಪಿನ್, ನೆತ್ತೆರೆಕೆರೆ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್ ಸೇರಿದಂತೆ ಎಲ್ಲೆಡೆ ತೆರೆ ಕಾಣಲಿದೆ.