ಮೈಸೂರು: ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿರುವ ಲಾಡ್ಜ್ ವೊಂದರಲ್ಲಿ ನಡೆದಿದೆ.
ಗೆರಸನಹಳ್ಳಿ ಗ್ರಾಮದ ನಿವಾಸಿ ರಕ್ಷಿತಾ (20)ಹತ್ಯೆಗೊಳಗಾದ ಮಹಿಳೆ. ಬಿಳಿಕೆರೆ ಗ್ರಾಮದ ನಿವಾಸಿ ಸಿದ್ಧರಾಜು ಕೊಲೆಗೈದ ಆರೋಪಿ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೆರಸನಹಳ್ಳಿಯ ರಕ್ಷಿತಾ(20) ಕೇರಳದ ಸುಭಾಷ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಈಕೆ ಮದುವೆಯಾದ ಬಳಿಕವೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ನಿವಾಸಿಯಾಗಿರುವ ಸಿದ್ದರಾಜು ಜೊತೆಗಿನ ಪ್ರೀತಿ ಮುಂದುವರೆದಿತ್ತು ಎಂದು ಹೇಳಲಾಗಿದೆ.
ಸಿದ್ದರಾಜು ಮೃತ ರಕ್ಷಿತಾಗೆ ಹತ್ತಿರದ ಸಂಬಂಧಿಯಾಗಿದ್ದು, ಮದುವೆಗೂ ಮುನ್ನ ಈ ಸಿದ್ದರಾಜು ಮೃತ ರಕ್ಷಿತಾಳನ್ನ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ಮನೆಯವರು ಕೇರಳದ ಯುವಕನ ಜೊತೆ ಮದುವೆ ಮಾಡಿದ್ದರು ಎನ್ನಲಾಗಿದೆ.
ಕೇರಳದಿಂದ ತವರು ಮನೆಗೆ ಬಂದ ರಕ್ಷಿತಾ, ಸಿದ್ದರಾಜು ಜೊತೆ ಸುತ್ತಾಟ ನಡೆಸುತ್ತಿದ್ದಳು. ಕಳೆದ ಶುಕ್ರವಾರ ಮಗುವನ್ನು ಬಿಟ್ಟು ಕೇರಳದಲ್ಲಿ ಅತ್ತೆಗೆ ಹುಷಾರಿಲ್ಲ ಎಂದು ಸುಳ್ಳು ಹೇಳಿ ಮನೆಯಿಂದ ಹೋಗಿ, ಬಳಿಕ ಸಿದ್ದರಾಜು ಜೊತೆ ಕೆ.ಆರ್. ನಗರದ ಕಪ್ಪಡಿ ಕ್ಷೇತ್ರದ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿರುವ ಎಸ್.ಜಿ.ಅರ್. ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ರೂಮ್ ಪಡೆದು ಉಳಿದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಲಾಡ್ಜ್ ನಲ್ಲಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಸಿದ್ದರಾಜು ಮೊದಲೇ ಪ್ಲಾನ್ ಮಾಡಿದ್ದಂತೆ ಜಿಲೆಟಿನ್ ಕಡ್ಡಿಯನ್ನು ಬಾಯಿಗೆ ಇಟ್ಟು ಸ್ಫೋಟ ಮಾಡಿದ್ದಾನೆ. ಸ್ಫೋಟದಿಂದ ತೀವ್ರತೆಗೆ ರಕ್ಷಿತಾಳ ಮುಖ ಛಿದ್ರವಾಗಿದ್ದು, ಲಾಡ್ಜ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸದ್ಯಕ್ಕೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.